ಸಿಎಂ siddaramaiah ರಾಜೀನಾಮೆಗೆ ಕೌಂಟ್‌ಡೌನ್? ಕರ್ನಾಟಕ ರಾಜಕೀಯದಲ್ಲಿ ಮುಂದೆ ಏನಾಗಬಹುದು!

2028ರಲ್ಲಿ ರಾಜ್ಯ ಚುನಾವಣೆ ನಡೆಯಲಿದ್ದು, ಇಂತಹ ಸಂದರ್ಭದಲ್ಲಿ ಸಿಎಂ siddaramaiah ಅವರು ಹೈಕಮಾಂಡ್‌ನ ನಿರ್ಧಾರದ ಮೇರೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಹೈಕಮಾಂಡ್ ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಬಹುತೇಕ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದು ಖಚಿತವಾಗಿದೆ. ಒಬ್ಬ ಅಹಿಂದ ನಾಯಕನಾಗಿ, ಹಲವು ಸಚಿವರು ಮತ್ತು ಶಾಸಕರ ಬೆಂಬಲ ಹೊಂದಿರುವ ಹಿರಿಯ ನಾಯಕರಾದ ಕಾರಣ, ಅವರ ಬೆಂಬಲಿಗರ ನಡುವೆ ಸಮಾನ-ಅಸಮಾನ ಭಿನ್ನಾಭಿಪ್ರಾಯಗಳು ಸ್ಫೋಟಗೊಳ್ಳುವ ಸಾಧ್ಯತೆ ಇದೆ.

ನಾಳೆ ಮುಖ್ಯಮಂತ್ರಿ siddaramaiah ರಾಜೀನಾಮೆಗೆ ಸಾಧ್ಯತೆ

ನಾಳೆ ಗುರುವಾರ ಸಿಎಂ siddaramaiah ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇವತ್ತು ನಡೆದ ಹೈಕಮಾಂಡ್ ಸಭೆಯಲ್ಲಿ ಈ ಕುರಿತು ಮಹತ್ವದ ಚರ್ಚೆ ನಡೆದಿದ್ದು, ನಾಳೆ ರಾಜ್ಯದ ಜನತೆಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಸಮ್ಮುಖದಲ್ಲೇ ರಾಜೀನಾಮೆ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಜೊತೆಗೆ, ರಾಜೀನಾಮೆಯ ನಂತರ ಯಾವ ರೀತಿಯ ರಾಜಕೀಯ ಪರಿಣಾಮಗಳು ಉಂಟಾಗಬಹುದು ಎಂಬ ಲೆಕ್ಕಾಚಾರವೂ ಈಗಾಗಲೇ ಆರಂಭವಾಗಿದೆ.

ಅಹಿಂದ ನಾಯಕರ ಅಸಮಾಧಾನ

ಅಹಿಂದ ನಾಯಕರ ಅಸಮಾಧಾನ ಕಾಂಗ್ರೆಸ್‌ಗೆ ದೊಡ್ಡ ಆತಂಕವಾಗಬಹುದು. siddaramaiah ಅವರು ಅಹಿಂದ ಸಮುದಾಯದ ಪ್ರಭಾವಿ ನಾಯಕರು ಎಂಬ ಕಾರಣದಿಂದ, ಅವರ ರಾಜೀನಾಮೆಯಿಂದ ಅಹಿಂದ ನಾಯಕರಲ್ಲಿ ಅಸಮಾಧಾನ ಮೂಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಬೇಕಾಗಿದೆ. ಸಿದ್ದರಾಮಯ್ಯ ಅವರು ರಾಜ್ಯದ ಪ್ರಮುಖ ಹಾಗೂ ಜನಪ್ರಿಯ ನಾಯಕರು ಆದ್ದರಿಂದ, ಅವರು ರಾಜೀನಾಮೆ ನೀಡಿದರೂ ಮುಂದಿನ ದಿನಗಳಲ್ಲಿ ಅವರಿಗೆ ಹೈ ಲೆವೆಲ್ ಹುದ್ದೆ ನೀಡಿದರೆ ಅಚ್ಚರಿಯಿಲ್ಲ.

ಹೊಸ ಮುಖ್ಯಮಂತ್ರಿ ಆಯ್ಕೆ

ಈಗಾಗಲೇ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆದ ಒತ್ತಡ ಮತ್ತು ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗುತ್ತಿದೆ.

ಆದರೆ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಒಳಗೇ ಕೆಲ ನಾಯಕರಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದೇ ವೇಳೆ ಸಿದ್ದರಾಮಯ್ಯ ಅವರು “ದಲಿತ ಸಿಎಂ” ಎಂಬ ಚರ್ಚೆಯನ್ನು ಮುಂದಿರಿಸಿದ್ದು, ಡಾ. ಜಿ. ಪರಮೇಶ್ವರ್ ಅವರ ಹೆಸರನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ಮುನ್ನಲೆಗೆ ತಂದಿದ್ದಾರೆ.

ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಪಕ್ಷದೊಳಗಿನ ಅಸಮಾಧಾನ ನಿಯಂತ್ರಿಸಲು ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಚರ್ಚೆಯೂ ನಡೆಯುತ್ತಿದೆ ಎನ್ನಲಾಗಿದ್ದು, ಇದರಿಂದ ಮತ್ತಷ್ಟು ರಾಜಕೀಯ ಗೊಂದಲ ಉಂಟಾಗುವ ಸಾಧ್ಯತೆ ಇದೆ.

ರಾಜೀನಾಮೆ ನಂತರ ಸಿದ್ದರಾಮಯ್ಯರ ನಡೆ

ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರೆ, ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಹಿಂದ ಸಮುದಾಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಅನುಭವ ಮತ್ತು ನಾಯಕತ್ವವನ್ನು ರಾಷ್ಟ್ರ ರಾಜಕಾರಣದಲ್ಲಿ ಬಳಸಿಕೊಳ್ಳುವ ಲೆಕ್ಕಾಚಾರವೂ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿದೆ.

ಈಗಾಗಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಎರಡು ಪ್ರಮುಖ ಬಣಗಳು ರೂಪುಗೊಂಡಿವೆ — ಒಂದು ಸಿದ್ದರಾಮಯ್ಯ ಬಣ ಹಾಗೂ ಮತ್ತೊಂದು ಡಿ.ಕೆ. ಶಿವಕುಮಾರ್ ಬಣ. ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಯ ಬಳಿಕ ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

ಈ ಪವರ್ ಶೇರಿಂಗ್ ಮತ್ತು ಒಳರಾಜಕೀಯ ಸಮತೋಲನವನ್ನು ಹೈಕಮಾಂಡ್ ಹೇಗೆ ಬಗೆಹರಿಸುತ್ತದೆ ಎಂಬುದು ಸದ್ಯ ಕಾಂಗ್ರೆಸ್ ಎದುರಿಸುತ್ತಿರುವ ದೊಡ್ಡ ಸವಾಲಾಗಿದೆ.

ಮುಂದಿನ ಸವಾಲು

2028ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗ ನಡೆಯುತ್ತಿರುವ ಈ ಎಲ್ಲಾ ರಾಜಕೀಯ ಬೆಳವಣಿಗೆಗಳು ನೇರವಾಗಿ ಚುನಾವಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ ಪ್ರಭಾವಿ ಹಾಗೂ ಜನಾಧಾರ ಹೊಂದಿರುವ ನಾಯಕರು. ಆದ್ದರಿಂದ ಅವರ ಅಭಿಪ್ರಾಯ ಮತ್ತು ಅಹವಾಲುಗಳನ್ನು ಗಮನದಲ್ಲಿಟ್ಟುಕೊಂಡೇ ಮುಂದಿನ ರಾಜಕೀಯ ನಡೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Leave a Comment